ADVERTISEMENT

ತ್ರಿವರ್ಣ ಧ್ವಜ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚಾಲನೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 4:11 IST
Last Updated 13 ಆಗಸ್ಟ್ 2022, 4:11 IST
ವಿದ್ಯಾರ್ಥಿಗಳು 30 ಅಡಿ ಉದ್ದದ ತ್ರಿವರ್ಣ ಧ್ವಜ ಹಿಡಿದು ಸಾಗಿದ್ದು ಗಮನ ಸೆಳೆಯಿತು.
ವಿದ್ಯಾರ್ಥಿಗಳು 30 ಅಡಿ ಉದ್ದದ ತ್ರಿವರ್ಣ ಧ್ವಜ ಹಿಡಿದು ಸಾಗಿದ್ದು ಗಮನ ಸೆಳೆಯಿತು.   

ಚಾಮರಾಜನಗರ: ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನಕ್ಕೆ ಚಾಮರಾಜನಗರದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಶನಿವಾರ ಚಾಲನೆ ನೀಡಿದರು.

ಜಿಲ್ಲಾಡಳಿತ ಭವನದ ಮುಂಭಾಗ ಧ್ವಜಾರೋಹಣ ನಡೆಸಿದ ಅವರು, ಬಳಿಕ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ದೇವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ, ವಿವಿಧ ಶಾಲೆಗಳ ವಿದ್ಯಾರ್ಥಿಗಳು,ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.

ADVERTISEMENT

ಜಿಲ್ಲಾಡಳಿತ ಭವನದ‌ ಮುಂಭಾಗ ಆರಂಭಗೊಂಡ ಜಾಥಾ ಬಿ.ರಾಚಯ್ಯ ಜೋಡಿ ರಸ್ತೆ, ಭುವನೇಶ್ವರಿ ವೃತ್ತದ ಮೂಲಕ ಸಾಗಿ ಚಾಮರಾಜೇಶ್ವರ ಸ್ವಾಮಿ ದೇವಾಲಯದವರೆಗೆ ಸಾಗಿ ವಾಪಸ್ ಜಿಲ್ಲಾಡಳಿತ ಭವನಕ್ಕೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.