ಚಾಮರಾಜನಗರ: ಜಿಲ್ಲಾಡಳಿತ ಭವನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲೆತ್ನಿಸಿದ ನಾಯಕ ಸಮಾಜದ ಹಲವು ಮುಖಂಡರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡರು.
ಜಿಲ್ಲಾಡಳಿತ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಿ, ಪ್ರತ್ಯೇಕವಾಗಿ ಜಯಂತಿ ಆಚರಿಸಿದ ಮುಖಂಡರು ಜಿಲ್ಲಾಡಳಿತ ಭವನದ ಆವರಣದೊಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ಲಾಠಿ ಬೀಸಿ ಉದ್ರಿಕ್ತರ ಗುಂಪನ್ನು ಚದುರಿಸಿದರು.
ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಕಾರರ ಮಧ್ಯೆ ತಳ್ಳಾಟ ನಡೆದು ಗೊಂದಲದ ಸನ್ನಿವೇಶ ನಿರ್ಮಾಣವಾಯಿತು. ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು ಬಸ್ ಹಾಗೂ ಡಿಎಆರ್ ವಾಹನಗಳಲ್ಲಿ ಠಾಣೆಗೆ ಕರೆದೊಯ್ದರು.
ಇದೇ ವೇಳೆ ಸಭೆ ನಡೆಸಿದ ಸಮಾಜದ ಮುಖಂಡರು, ಎರಡು ತಿಂಗಳೊಳಗೆ ಸರ್ಕಾರ ವಾಲ್ಮೀಕಿ ಪುತ್ಥಳಿ ನಿರ್ಮಿಸದಿದ್ದರೆ ಹೋರಾಟ ತೀವ್ರಗೊಳಿಸುವ ಒಮ್ಮತದ ನಿರ್ಣಯ ಕೈಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.