ADVERTISEMENT

ಚಾಮರಾಜನಗರ: ಹೆಚ್ಚು ಕೋವಿಡ್‌ ಪರೀಕ್ಷೆ, ಹೆಚ್ಚು ಪ್ರಕರಣ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 16:16 IST
Last Updated 15 ಸೆಪ್ಟೆಂಬರ್ 2021, 16:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 2,654 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಒಂಬತ್ತು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಂಗಳವಾರಕ್ಕೆ ಹೋಲಿಸಿದರೆ ಏಳು ಹೆಚ್ಚು ಪ್ರಕರಣಗಳುವರದಿಯಾಗಿವೆ.

ಐವರು ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. ದೃಢಪಟ್ಟ ಪ್ರಕರಣಗಳು ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿದೆ. ಐಸಿಯುನಲ್ಲಿ ಇಬ್ಬರು ಇದ್ದಾರೆ. 16 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ3,2416ಕ್ಕೆ ಏರಿದೆ. 31,831 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.