ADVERTISEMENT

ಚಾಮರಾಜನಗರ: 19 ಮಂದಿ ಗುಣಮುಖ, 13 ಹೊಸ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2020, 16:12 IST
Last Updated 16 ಡಿಸೆಂಬರ್ 2020, 16:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 13 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 19 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 94ಕ್ಕೆ ಇಳಿದಿದೆ.

51 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ನಾಲ್ವರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,567ಕ್ಕೆ ಏರಿದೆ. 6,345 ಮಂದಿ ಗುಣಮುಖರಾಗಿದ್ದಾರೆ. ಹೊಸ ಸಾವಿನ ಪ್ರಕರಣ ವರದಿಯಾಗಿಲ್ಲ.

ಬುಧವಾರ 1096 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1084 ಮಂದಿಯ ವರದಿ ನೆಗೆಟಿವ್‌ ಆಗಿದೆ. 12 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.