
ಪ್ರಜಾವಾಣಿ ವಾರ್ತೆ
ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 21 ಮಂದಿ ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. ಒಂಬತ್ತು ಹೊಸ ಪ್ರಕರಣಗಳು ದೃಢಪಟ್ಟಿವೆ. ಸಾವು ಸಂಭವಿಸಿಲ್ಲ.
ಗುಣಮುಖರಾದವರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 90ಕ್ಕೆ ಇಳಿದಿದೆ. ಈ ಪೈಕಿ 46 ಜನರು ಹೋಂ ಐಸೊಲೇಷನ್ ನಲ್ಲಿ ದ್ದಾರೆ. 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 6,320 ಪ್ರಕರಣಗಳು ದೃಢಪಟ್ಟಿವೆ. 6,102 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಕೋವಿಡ್ ನಿಂದ ಹಾಗೂ 20 ಮಂದಿ ಕೋವಿಡ್ ಯೇತರ ಕಾರಣದಿಂದ ಕೊನೆಯುಸಿರೆಳೆದಿದ್ದಾರೆ.
ಶನಿವಾರ 1106 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1099 ಮಂದಿಯ ವರದಿ ನೆಗೆಟಿವ್ ಬಂದಿವೆ. ಏಳು ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಎರಡು ಪ್ರಕರಣಗಳು ಮೈಸೂರಿನಲ್ಲಿ ದೃಢ ಪಟ್ಟಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.