ADVERTISEMENT

ಕುಮಾರಸ್ವಾಮಿಯೇ ಮುಖ್ಯಮಂತ್ರಿ: ಎನ್‌.ಮಹೇಶ್‌

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2018, 11:32 IST
Last Updated 31 ಆಗಸ್ಟ್ 2018, 11:32 IST
ಎನ್. ಮಹೇಶ್
ಎನ್. ಮಹೇಶ್   

ಕೊಳ್ಳೇಗಾಲ: ‘ಸಿದ್ದರಾಮಯ್ಯ ಅವರು ಎಲ್ಲಿ ಮುಖ್ಯಮಂತ್ರಿ ಆಗುತ್ತಾರೆ? ಸಮಿಶ್ರ ಸರ್ಕಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್‌.ಮಹೇಶ್‌ ಶುಕ್ರವಾರ ಹೇಳಿದರು.

ಕೊಳ್ಳೇಗಾಲನಗರಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸರ್ಕಾರದಲ್ಲಿ ಕುಮಾರಸ್ವಾಮಿ ಅವರನ್ನು ಬಿಟ್ಟು ಇನ್ನೊಬ್ಬರು ಹೇಗೆ ಮುಖ್ಯಮಂತ್ರಿ ಆಗಲು ಸಾಧ್ಯ. ನಾನು ಅವರ ಸಂಪುಟದಲ್ಲಿ ಸಚಿವನಾಗಿದ್ದೇನೆ. ಹಾಗಾಗಿ ನನ್ನ ಸಂಪೂರ್ಣ ಬೆಂಬಲ ಕುಮಾರಸ್ವಾಮಿಯವರಿಗೆ. ಕಾಂಗ್ರೆಸ್‌ ಶಾಸಕರೂ ಅವರನ್ನೇ ಬೆಂಬಲಿಸುತ್ತಿದ್ದಾರೆ’ ಎಂದರು.

‘ರಾಜ್ಯದ ಜನರಿಗಾಗಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ತರಬೇಕು ಎಂಬ ಕನಸನ್ನು ಕುಮಾರಸ್ವಾಮಿ ಹೊಂದಿದ್ದಾರೆ. ಅವರಿಗೆ ಯಾರೂ ತೊಂದರೆ ಮಾಡಬಾರದು’ ಎಂದು ಹೇಳಿದರು.

ADVERTISEMENT

ಮುಖ್ಯಮಂತ್ರಿ ಅವರು ದೇವಾಲಯಗಳಿಗೆ ಭೇಟಿ ನೀಡುತ್ತಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಕುಮಾರಸ್ವಾಮಿ ಅವರು ದೇವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಅದು ಅವರ ಸಂವಿಧಾನ ಬದ್ಧ ಹಕ್ಕು. ಆದರೆ, ವಿರೋಧ ಪಕ್ಷದವರು ಅದನ್ನು ಟೆಂಪಲ್‌ ರನ್ ಎಂದು ಟೀಕಿಸುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.