ADVERTISEMENT

ಚಾಮರಾಜನಗರ | 8ಕ್ಕೆ ಶ್ರೀನಿವಾಸ ಪ್ರಸಾದ್ ನುಡಿನಮನ 

ಅಂಬೇಡ್ಕರ್‌ ಭವನದಲ್ಲಿ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 2 ಮೇ 2024, 15:34 IST
Last Updated 2 ಮೇ 2024, 15:34 IST
ಶ್ರೀನಿವಾಸ ಪ್ರಸಾದ್‌ ಅವರ ನುಡಿ ನಮನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು
ಶ್ರೀನಿವಾಸ ಪ್ರಸಾದ್‌ ಅವರ ನುಡಿ ನಮನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು   

ಚಾಮರಾಜನಗರ: ಇತ್ತೀಚೆಗೆ ನಿಧನರಾದ ಮಾಜಿ ಕೇಂದ್ರ ಸಚಿವ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಗೌರವಾರ್ಥ ಇದೇ 8ರಂದು ನಗರದಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಲಿದೆ. 

ಶ್ರೀನಿವಾಸ ಪ್ರಸಾದ್ ಅಭಿಮಾನಿ ಬಳಗ, ಡಾ.ಬಿ.ಆರ್.ಅಂಬೇಡ್ಕರ್ ಸಂಘಟನೆಗಳ ಒಕ್ಕೂಟ, ರಂಗವಾಹಿನಿ ಸಂಸ್ಥೆ ವತಿಯಿಂದ ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನುಡಿ ನಮನ ಕಾರ್ಯಕ್ರಮ ಆಯೋಜಿಸುವ ತೀರ್ಮಾನ ಕೈಗೊಳ್ಳಲಾಗಿದೆ. 

ಸಭೆಯ ಬಗ್ಗೆ ಮಾಹಿತಿ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜುನಾಥ್, ‘ನುಡಿ ನಮನ ಕಾರ್ಯಕ್ರಮ ಸಾನಿಧ್ಯ ವಹಿಸಲು ಸಮುದಾಯದ ಕಲ್ಯಾಣ ಸಿರಿ ಬಂತೇಜಿ ಹಾಗೂ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಆಹ್ವಾನಿಸಲು ತೀರ್ಮಾನಿಸಲಾಯಿತು. ಶ್ರೀನಿವಾಸ ಪ್ರಸಾದ್ ಅವರ ಪತ್ನಿ, ಪುತ್ರಿಯರನ್ನೂ ಆಹ್ವಾನಿಸಲಾಗುವುದು’ ಎಂದು ಹೇಳಿದರು.

ADVERTISEMENT

ರಂಗವಾಹಿನಿ ಸಂಸ್ಥೆಯ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ಬಿಎಸ್‌ಪಿ ಜಿಲ್ಲಾಧ್ಯಕ್ಷ  ಎನ್.ನಾಗಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್, ನಗರಸಭಾ ಮಾಜಿ ಸದಸ್ಯ ಬಸವರಾಜು, ಎಸ್‌ಸಿ, ಎಸ್‌ಟಿ ಪದವೀಧರ ಒಕ್ಕೂಟದ ಅಧ್ಯಕ್ಷ  ನಾಗಸುಂದರ್, ಪ್ರಧಾನ  ಕಾರ್ಯದರ್ಶಿ ಸುರೇಶ್, ಆಲೂರು ನಾಗೇಂದ್ರ, ರಾಮಸಮುದ್ರ ಪ್ರಸನ್ನ, ಬಂಗಾರು, ರವಿಚಂದ್ರಪ್ರಸಾದ್ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.