ADVERTISEMENT

ಚಾಮರಾಜನಗರ: ಮೂವರು ಗುಣಮುಖ, ಒಬ್ಬರಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 17:10 IST
Last Updated 8 ಫೆಬ್ರುವರಿ 2021, 17:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಮೂವರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ಸಾವು ಸಂಭವಿಸಿಲ್ಲ.

ಸದ್ಯ ಜಿಲ್ಲೆಯಲ್ಲಿ 14 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 11 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲ.

ಜಿಲ್ಲೆಯಲ್ಲಿ ಇದುವರೆಗೆ 6,917 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 6,771 ಮಂದಿ ಗುಣಮುಖರಾಗಿದ್ದಾರೆ. 112 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಇತರ ಕಾರಣಗಳಿಂದ ಮೃತಪಟ್ಟಿದ್ದಾರೆ.

ADVERTISEMENT

ಸೋಮವಾರ 565 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 564 ವರದಿಗಳು ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.