ADVERTISEMENT

ಒಂದು ಪ್ರಕರಣ, ಇಬ್ಬರು ಗುಣಮುಖ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 17:14 IST
Last Updated 4 ಅಕ್ಟೋಬರ್ 2021, 17:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಕೇವಲ ಒಬ್ಬರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಇಬ್ಬರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 33ಕ್ಕೆ ಇಳಿದಿದೆ. ಈ ಪೈಕಿ 17 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ತುರ್ತು ನಿಗಾ ಘಟಕದಲ್ಲಿ ಯಾರೂ ಇಲ್ಲ.

ಇದುವರೆಗೆ ಜಿಲ್ಲೆಯಲ್ಲಿ 32,509 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 31,938 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಸೋಮವಾರ 1,290 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,289 ಮಂದಿಯ ವರದಿಗಳು ನೆಗೆಟಿವ್‌ ಬಂದಿವೆ. ಹನೂರು ತಾಲ್ಲೂಕಿನ ಒಬ್ಬರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.