ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 2,609 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಗುಂಡ್ಲುಪೇಟೆ ತಾಲ್ಲೂಕಿನ ಒಬ್ಬರಿಗೆ ಮಾತ್ರ ಸೋಂಕು ತಗುಲಿರುವುದು ದೃಢಪಟ್ಟಿದೆ.
ಒಬ್ಬರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ 28 ಇವೆ. ತೀವ್ರ ನಿಗಾ ಘಟಕದಲ್ಲಿ ಯಾರೂ ಇಲ್ಲ. 16 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಈವರೆಗೆ ಜಿಲ್ಲೆಯ 32,515 ಮಂದಿಗೆ ಸೋಂಕು ತಗುಲಿದೆ. 31,949 ಮಂದಿ ಗುಣಮುಖರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.