ADVERTISEMENT

ಚಾಮರಾಜನಗರ: 275 ಪ್ರಕರಣ ದೃಢ, 109 ಮಂದಿ ಸೋಂಕುಮುಕ್ತ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 14:23 IST
Last Updated 24 ಏಪ್ರಿಲ್ 2021, 14:23 IST
ಚಾಮರಾಜನಗರದ ಕೋವಿಡ್‌–19 ಆಸ್ಪತ್ರೆ
ಚಾಮರಾಜನಗರದ ಕೋವಿಡ್‌–19 ಆಸ್ಪತ್ರೆ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 275 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಒಂದು ಸಾವು ಸಂಭವಿಸಿದೆ. ದಾಖಲೆಯ 109 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,294ಕ್ಕೆ ಏರಿದೆ. ಸೋಂಕಿತರ ಪೈಕಿ 909 ಮಂದಿ ಹೋಂ ಐಸೊಲೇಷನ್‌ನಲ್ಲಿ ಇದ್ದಾರೆ. 58 ಮಂದಿ ಐಸಿಯುನಲ್ಲಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಬಾನಳ್ಳಿ ಗ್ರಾಮದ 62 ವರ್ಷ ಮಹಿಳೆ 23ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 122ಕ್ಕೆ ಏರಿದೆ. ಇತರ ಕಾರಣಗಳಿಂದ 20 ಮಂದಿ ನಿಧನರಾಗಿದ್ದಾರೆ.

ADVERTISEMENT

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 9,032ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 7,596ಕ್ಕೆ ಹಿಗ್ಗಿದೆ.

ಶನಿವಾರ 1,436 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,141 ವರದಿಗಳು ನೆಗಟಿವ್‌ ಬಂದಿವೆ. 295 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ 10 ಪ್ರಕರಣಗಳು ಮೈಸೂರು ಜಿಲ್ಲೆಗೆ ಸೇರಿದಂತಹವು. ಇನ್ನು 10 ಪ್ರಕರಣಗಳಲ್ಲಿ ಸೋಂಕಿತರ ವಿವರ ಪತ್ತೆಯಾಗಿಲ್ಲ.

ಶನಿವಾರ ಚಾಮರಾಜನಗರ ತಾಲ್ಲೂಕಿನಲ್ಲಿ 130, ಕೊಳ್ಳೇಗಾಲ ತಾಲ್ಲೂಕಿನಲ್ಲಿ 51, ಗುಂಡ್ಲುಪೇಟೆಯಲ್ಲಿ 48, ಹನೂರಿನಲ್ಲಿ 30, ಯಳಂದೂರು ತಾಲ್ಲೂಕಿನಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ. ಹೊರ ಜಿಲ್ಲೆಯ ಮೂರು ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.