ADVERTISEMENT

ಚಾಮರಾಜನಗರ: ಒಂದು ಸಾವು, 7 ಹೊಸ ಪ್ರಕರಣ, 20 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 15:16 IST
Last Updated 12 ನವೆಂಬರ್ 2020, 15:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ನಿಂದ ಒಬ್ಬರು ಮೃತಪಟ್ಟಿದ್ದಾರೆ. ಏಳು ಹೊಸ ಪ್ರಕರಣಗಳು ದೃಢಪಟ್ಟಿವೆ. 20 ಮಂದಿ ಗುಣಮುಖರಾಗಿದ್ದಾರೆ. ಹಲವು ತಿಂಗಳ ಬಳಿಕ ಜಿಲ್ಲೆಯಲ್ಲಿ ಇಷ್ಟು ಕಡಿಮೆ ಪ್ರಕರಣ ವರದಿಯಾಗಿರುವುದು ಇದೇ ಮೊದಲು.

ಚಾಮರಾಜನಗರ ತಾಲ್ಲೂಕಿನ ಕಾಗಲವಾಡಿ ಗ್ರಾಮದ 45 ವರ್ಷದ ಮಹಿಳೆ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಮೃತಪಟ್ಟಿದ್ದಾರೆ. ವಾರದ ಬಳಿಕ ಸಾವಿನ ಪ್ರಕರಣ ವರದಿಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 6,157 ಮಂದಿಗೆ ಸೋಂಕು ತಗುಲಿದೆ. 5,899 ಮಂದಿ ಗುಣಮುಖರಾಗಿದ್ದಾರೆ. ಸದ್ಯ 131 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 85 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 29 ಮಂದಿ ಇದ್ದಾರೆ.

ADVERTISEMENT

ಗುರುವಾರ 981 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 976 ಮಂದಿಯ ವರದಿ ನೆಗೆಟಿವ್‌ ಬಂದಿವೆ. ಐದು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಎರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.