ADVERTISEMENT

ಚಾಮರಾಜನಗರ: 16 ಹೊಸ ಪ್ರಕರಣ, 15 ಮಂದಿ ಗುಣಮುಖ, ಒಂದು ಸಾವು

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 14:13 IST
Last Updated 1 ನವೆಂಬರ್ 2020, 14:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 16 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 15 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.‌

ತಾಲ್ಲೂಕಿನ ರೇಚಂಬಳ್ಳಿ ಗ್ರಾಮದ ನಿವಾಸಿ 85 ವರ್ಷ ವೃದ್ಧ ಅ.20ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸಿದೇ ಶನಿವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ 105ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 19 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 5,980 ಪ್ರಕರಣಗಳು ವರದಿಯಾಗಿವೆ. 5,628 ಮಂದಿ ಗುಣಮುಖರಾಗಿದ್ದಾರೆ. ಸದ್ಯ 228 ಸಕ್ರಿಯ ಪ್ರಕರಣಗಳಿದ್ದು, 129 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 40 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌

ADVERTISEMENT

ಭಾನುವಾರ 1029 ಕೋವಿಡ್‌ ಪರೀಕ್ಷೆಗಳ ವರದಿ ಬಂದಿದ್ದು, 1,017 ಮಂದಿಯ ವರದಿ ನೆಗೆಟಿವ್‌ ಬಂದಿವೆ. 12 ಮಂದಿಗೆ ಸೋಂಕಿರುವುದು ಖಚಿತವಾಗಿದೆ. ನಾಲ್ಕು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.