ADVERTISEMENT

ಚಾಮರಾಜನಗರ: 175 ಮಂದಿಗೆ ಸೋಂಕು, 73 ಜನ ಗುಣಮುಖ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 16:36 IST
Last Updated 21 ಏಪ್ರಿಲ್ 2021, 16:36 IST
ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲು ಗುರುತಿಸಲಾಗಿರುವ ಮುಕ್ತ ವಿವಿಯ ಪ್ರಾದೇಶಿಕ ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು
ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲು ಗುರುತಿಸಲಾಗಿರುವ ಮುಕ್ತ ವಿವಿಯ ಪ್ರಾದೇಶಿಕ ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ದಾಖಲೆ 175 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ.

ಕಳೆದ ವರ್ಷದ ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಲು ಆರಂಭಿಸಿದ ನಂತರ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳು ದೃಢಪಡುತ್ತಿರುವುದು ಇದೇ ಮೊದಲು.

ಬುಧವಾರ 73 ಜನರು ಕೋವಿಡ್ ಮುಕ್ತರಾಗಿದ್ದಾರೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 726ಕ್ಕೆ ಏರಿದೆ. ಈ ಪೈಕಿ 466 ಮಂದಿ ಹೋಂ ಐಸೋಲೇಶನ್ನಲ್ಲಿದ್ದಾರೆ. ಬುಧವಾರ ಸಾವಿನ ಪ್ರಕರಣಗಳು ವರದಿಯಾಗಿಲ್ಲ.

ADVERTISEMENT

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 8,241ಕ್ಕೆ ಏರಿದೆ. 7,376 ಮಂದಿ ಸೋಂಕು ಮುಕ್ತರಾಗಿದ್ದಾರೆ. 119 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಅನ್ಯ ಕಾರಣಗಳಿಂದ ನಿಧನರಾಗಿದ್ದಾರೆ.

ಬುಧವಾರ 1,346 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, 1,171 ವರದಿಗಳು ನೆಗೆಟಿವ್ ಬಂದಿವೆ.

ದೃಢಪಟ್ಟ 175 ಪ್ರಕರಣಗಳಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ 61, ಕೊಳ್ಳೇಗಾಲದಲ್ಲಿ 40, ಗುಂಡ್ಲುಪೇಟೆಯಲ್ಲಿ 37, ಹನೂರು ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಕ್ರಮವಾಗಿ 18 ಮತ್ತು 17 ಹಾಗೂ ಹೊರ‌ಜಿಲ್ಲೆಯ ಎರಡು ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.