ಹನೂರು (ಚಾಮರಾಜನಗರ): ತಾಲ್ಲೂಕಿನ ನಾಗರಕಟ್ಟೆ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಗ್ರಾಮದ ವಡಿವೇಲು ಎಂಬುವವನನ್ನು ಶನಿವಾರ ರಾತ್ರಿ ಬಂಧಿಸಿದ್ದಾರೆ.
ಜಮೀನಿನಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಇನ್‌ಸ್ಪೆಕ್ಟರ್ ರವಿನಾಯಕ್ ಅವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಅಕ್ರಮವಾಗಿ ಗಾಂಜಾ ಬೆಳೆದಿರುವುದು ಕಂಡು ಬಂದಿದೆ. ಒಟ್ಟು 129 ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಗಿಡಗಳ ತೂಕ 290 ಕೆ.ಜಿ.ಗಳಿಷ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.