ADVERTISEMENT

ಚಾಮರಾಜನಗರ: 938 ಕೋವಿಡ್‌ ಪರೀಕ್ಷೆ, ಇಬ್ಬರಿಗಷ್ಟೇ ಸೋಂಕು

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 16:56 IST
Last Updated 10 ಜನವರಿ 2021, 16:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 938 ಕೋವಿಡ್‌ ಪರೀಕ್ಷಾ ವರದಿಗಳು ಬಂದಿದ್ದು, ಕೇವಲ ಇಬ್ಬರಿಗೆ ಮಾತ್ರ ಸೋಂಕು ಇರುವುದು ದೃಢಪಟ್ಟಿದೆ. 11 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 48ಕ್ಕೆ ಇಳಿದಿದೆ. ಈ ಪೈಕಿ 35 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಒಂದೇ ದಿನ ಐಸಿಯುಗೆ ಏಳು ಜನ ದಾಖಲಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಗುಣಮುಖರಾದವರ ಸಂಖ್ಯೆ 6,649ಕ್ಕೆ ಏರಿದೆ.6,828 ಪ್ರಕರಣಗಳು ದೃಢಪಟ್ಟಿವೆ. ಸಾವಿನ ಪ್ರಕರಣಗಳಲ್ಲಿ ವ್ಯತ್ಯಾಸವಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.