ADVERTISEMENT

ಇಬ್ಬರಿಗೆ ಕೋವಿಡ್‌ ದೃಢ, 29ಕ್ಕೆ ಇಳಿದ ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 15:39 IST
Last Updated 20 ಜನವರಿ 2021, 15:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಎರಡು ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಆರು ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 29ಕ್ಕೆ ಇಳಿದಿದೆ. ಸಾವು ಸಂಭವಿಸಿಲ್ಲ.

ಸೋಂಕಿತ 29 ಮಂದಿಯ ಪೈಕಿ 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲ.

ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 6868ಕ್ಕೆ ಹೆಚ್ಚಳವಾಗಿದ್ದು, 6,708 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಬುಧವಾರ 1059 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1057 ವರದಿಗಳು ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.