ADVERTISEMENT

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಫೆಬ್ರುವರಿಯಲ್ಲಿ ನೇಮಕಾತಿ ಪತ್ರ: ಸಚಿವ ವೆಂಕಟೇಶ್

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 22:35 IST
Last Updated 22 ಜನವರಿ 2026, 22:35 IST
ಕೆ.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ 
ಕೆ.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ    

ಚಾಮರಾಜನಗರ: ‘ಐದು ವರ್ಷಗಳ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ನೌಕರಿ ನೀಡಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿಯಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಇಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಗಣರಾಜ್ಯೋತ್ಸವ ದಿನವಾದ ಜ.26ರಂದು 30 ಮಂದಿಗೆ ನೇಮಕಾತಿ ಪತ್ರ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಮುಖ್ಯಮಂತ್ರಿಯವರು ಭೇಟಿ ನೀಡಿದಾಗಲೇ ವಿತರಿಸಲು ನಿರ್ಧರಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT