ಕೊಳ್ಳೇಗಾಲ: ಇಲ್ಲಿನ ಭೀಮನಗರದ ದಿಡ್ಡದಕೇರಿ ಬಡವಾಣೆಯ ನವೀನ್ ಎಂಬುವವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಚಿಪ್ಪುಹಂದಿಯನ್ನು ರಕ್ಷಿಸಲಾಯಿತು.
ಬೆಳ್ಳಂಬೆಳಗ್ಗೆ ನವೀನ್ ಅವರು ಮನೆಯ ಕೆಲಸದಲ್ಲಿ ತೊಡಗಿದ್ದಾಗ ಕೊಠಡಿಯ ಮೂಲೆಯಲ್ಲಿ ಅವಿತು ಕುಳಿತಿದ್ದ ಚಿಂಪುಹಂದಿ ನೋಡಿ ಗಾಬರಿಯಾಗಿದ್ದಾರೆ.
ಈ ಕುರಿತು ಉರಗ ತಜ್ಞ ಸ್ನೇಕ್ ರಘು ಅವರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ನೇಕ್ ರಘು ಚಿಂಪ್ಪುಹಂದಿಯನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ. ಬಳಿಕ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿ ಅಧಿಕಾರಿಗಳ ಸಮ್ಮುಖದಲ್ಲಿ ಬಿಆರ್‌ಟಿ ಅರಣ್ಯ ವ್ಯಾಪ್ತಿಯ ಗುಂಡಾಲ್ ಜಲಾಶಯದ ಕಾಡಿಗೆ ಬಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.