ADVERTISEMENT

ಅಂತರ ಜಿಲ್ಲೆಗೆ ಸಂಚಾರಕ್ಕೆ ಪಾಸ್‌ ಬೇಕಿಲ್ಲ: ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 20 ಮೇ 2020, 15:50 IST
Last Updated 20 ಮೇ 2020, 15:50 IST
ಎಚ್‌.ಡಿ.ಆನಂದ ಕುಮಾರ್‌
ಎಚ್‌.ಡಿ.ಆನಂದ ಕುಮಾರ್‌   

ಚಾಮರಾಜನಗರ: ಅಂತರಜಿಲ್ಲೆ ಸಂಚಾರಕ್ಕೆ ಇನ್ನು ಮುಂದೆ ಪಾಸ್‌ ಅಗತ್ಯವಿಲ್ಲ ಎಂದು ಜಿಲ್ಲಾ ಪೊಲೀಸ್‌ ಇಲಾಖೆ ಹೇಳಿದೆ.

ಖಾಸಗಿ ವಾಹನಗಳಲ್ಲಿ ಸಂಚರಿಸುವವರು ಪಾಸ್‌ ಪಡಯಬೇಕಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಮಾಡಿದ್ದ ಟ್ವೀಟ್‌ ಅನ್ನು ಜಿಲ್ಲಾ ಪೊಲೀಸ್‌ ಇಲಾಖೆಯ ಫೇಸ್‌ಬುಕ್‌ ಪುಟದಲ್ಲಿ ಹಂಚಿಕೊಂಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಅವರು, ‘ಪಾಸ್‌ ಇಲ್ಲದೇ ಯಾವುದೇ ಮಾದರಿಯ ವಾಹನದಲ್ಲಿ ರಾಜ್ಯದೊಳಗೆ ಯಾವ ಜಿಲ್ಲೆಗೂ ಪ್ರಯಾಣಿಸಬಹುದು ಎಂದು ಹೇಳಿದ್ದಾರೆ.

ಬೆಳಿಗ್ಗೆ 7ರಿಂದ ಸಂಜೆ 7ಗಂಟೆ ಒಳಗೆ ಮಾತ್ರ ಪ್ರಯಾಣಿಸಲು ಅವಕಾಶ ಇದೆ. ಬೈಕಿನಲ್ಲಿ ಒಬ್ಬರಿಗೆ, ಆಟೊದಲ್ಲಿ ಚಾಲಕ ಸೇರಿ ಮೂರು ಜನ, ಬಸ್‌ನಲ್ಲಿ 30 ಜನ, ಉಳಿದ ವಾಹನಗಳಲ್ಲಿ ಆಸನ ಸಾಮರ್ಥ್ಯದ ಅರ್ಧದಷ್ಟು ಜನರು ಮಾತ್ರ ಪ್ರಯಾಣಿಸಬಹುದು ಎಂದು ಅವರು ಹೇಳಿದ್ದಾರೆ.

ADVERTISEMENT

ಚೆಕ್‌ಪೋಸ್ಟ್‌ಗಳಲ್ಲಿ ಪಾಸ್ ಕೇಳುವುದಿಲ್ಲ. ಆದರೆ ಥರ್ಮಲ್ ಸ್ಕ್ರೀನಿಂಗ್ ಇದ್ದು ಪ್ರತಿಯೊಬ್ಬ ಪ್ರಯಾಣಿಕರನ್ನೂ ತಪಾಸಣೆಗೆ ಒಳಪಡಿಸಲಾಗುವುದು.ಅಗತ್ಯವಿದ್ದಲ್ಲಿ ಮಾತ್ರ ಪ್ರಯಾಣಿಸಿ, ಪ್ರಯಾಣದ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯ, ಸುರಕ್ಷಿತ ಅಂತರವನ್ನೂ ಕಾಪಾಡಿಕೊಳ್ಳಬೇಕು. ಆಗಾಗ್ಗೆ ಸ್ಯಾನಿಟೈಸರ್ ಬಳಸಿ’ ಎಂದು ಅವರು ಪೇಸ್‌ಬುಕ್‌ ಪೋಸ್ಟ್‌ನಲ್ಲಿ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.