ಸಾಂದರ್ಭಿಕ ಚಿತ್ರ
ಕೊಳ್ಳೇಗಾಲ: ತಾಲ್ಲೂಕಿನ ಉಗನಿಯ ಗ್ರಾಮದ ಲತಾ ಎಂಬುವರು ಕುಡಿಯುವ ನೀರು ಎಂದು ಭಾವಿಸಿ ಕ್ರಿಮಿನಾಶಕ ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಂದೆ ಕುಡಿಯುವ ನೀರಿನ ಬಾಟಲಿಯಲ್ಲಿ ಕ್ರಿಮಿನಾಶಕ ಔಷಧಿ ಇಟ್ಟಿದ್ದರು. ಬೆಳಿಗ್ಗೆ ಜಮೀನಿಗೆ ಹೋದ ಸಂದರ್ಭದಲ್ಲಿ ಬಾಯಾರಿಕೆಯಾಗಿದೆ ಬಾಟಲಿಯಲ್ಲಿರುವುದು ನೀರೆಂದು ಭಾವಿಸಿ ಕುಡಿದಿದ್ದಾರೆ.
ತಕ್ಷಣ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಲತಾ ಚೇತರಿಸಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.