
ಕೊಳ್ಳೇಗಾಲ: ತಾಲ್ಲೂಕಿನ ಸೂರಪುರ ಗ್ರಾಮದ ಕಮಲಮ್ಮ ಎನ್ನುವರ 50 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಸೂರಪುರ ಗ್ರಾಮದ ರವಿ (28) ಬಂಧಿತ ಆರೋಪಿ.
ಈತನಿಂದ ಕಳ್ಳತನ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ಫೆ.18 ರಂದು ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿತ್ತು. ಈ ಪ್ರಕರಣ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಹಾಗೂ ಡಿವೈಎಸ್ಪಿ ಧರ್ಮೇಂದ್ರ ಅವರ ಮಾರ್ಗದರ್ಶನದಲ್ಲಿ ಯಳಂದೂರು ಸಿಪಿಐ ಸುಬ್ರಮಣ್ಯ, ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಎಸ್ಐ ಕರಿಬಸಪ್ಪ ಹಾಗೂ ಪೊಲೀಸ್ ಸಿಬ್ಬಂದಿ ತಂಡ ರಚಿಸಲಾಗಿತ್ತು.
ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಈ ಸಂಬಂಧ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡವನ್ನು ಎಸ್‌ಪಿ ಮುತ್ತುರಾಜು ಶ್ಲಾಘಿಸಿ ಪ್ರಶಂಸನೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.