ADVERTISEMENT

ಅತ್ಯಾಚಾರ ಆರೋಪ; ಪೊಲೀಸ್‌ ಕಾನ್‌ಸ್ಟೆಬಲ್‌ ಬಂಧನ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 13:03 IST
Last Updated 17 ನವೆಂಬರ್ 2020, 13:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಅತ್ಯಾಚಾರ ನಡೆಸಿರುವ ಆರೋಪದ ಅಡಿಯಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರನ್ನು ನಗರದ ರಾಮಸಮುದ್ರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಸಂತೇಮರಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸಾದ್‌ ಅವರು ಬಂಧಿತ ಕಾನ್‌ಸ್ಟೆಬಲ್‌. ‘ಯುವತಿಯೊಬ್ಬರು ಸೋಮವಾರ ಅತ್ಯಾಚಾರದ ದೂರು ನೀಡಿದ್ದರು. ಅದರ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ರವಿಕುಮಾರ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಸಾದ್‌ ಅವರು ತಾಲ್ಲೂಕಿನ ಇರಸವಾಡಿ ಸುತ್ತೂರಿನವರು. ದೂರು ಕೊಟ್ಟ ಯುವತಿ ಹಾಗೂ ಪ್ರಸಾದ್‌ ಅವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಗೊತ್ತಾಗಿದೆ. ದೈಹಿಕ ಸಂಬಂಧವನ್ನೂ ಹೊಂದಿದ್ದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಸಾದ್‌ ಅವರುಕೆಲವು ತಿಂಗಳ ಕಾನ್‌ಸ್ಟೆಬಲ್‌ ಆಗಿ ನೇಮಕಗೊಂಡಿದ್ದರು. ಆ ಬಳಿಕ ಯುವತಿಯಿಂದ ದೂರವಾಗಿದ್ದರು ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.