ADVERTISEMENT

ಪಣ್ಯದಹುಂಡಿ: ವಿದ್ಯುತ್ ವ್ಯತ್ಯಯ ನಾಳೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2023, 20:16 IST
Last Updated 21 ಸೆಪ್ಟೆಂಬರ್ 2023, 20:16 IST

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಉಪವಿಭಾಗ ವ್ಯಾಪ್ತಿಯಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಶನಿವಾರ (ಸೆ.23) ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಪಣ್ಯದಹುಂಡಿ, ಬದನಗುಪ್ಪೆ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‌ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ 10 ಮತ್ತು 11, ಮುತ್ತಿಗೆ, ಹೆಗ್ಗೋಠಾರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.