ADVERTISEMENT

ಚಾಮರಾಜನಗರ: ವಿವಿಧೆಡೆ ವಿದ್ಯುತ್ ಸ್ಥಗಿತ ನಾಳೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2023, 5:22 IST
Last Updated 15 ಜುಲೈ 2023, 5:22 IST
ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ   

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ (ಸೆಸ್ಕ್‌) ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಭಾನುವಾರ (ಜುಲೈ 16) ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10ರಿಂದ ಸಂಜೆ 6ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಎಚ್.ಮೂಕಳ್ಳಿ, ಕುರುಬರಹುಂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.