ADVERTISEMENT

ಪ್ರತಿಭೆಯಲ್ಲಿ ಸರ್ಕಾರಿ ಶಾಲಾ ಮಕ್ಕಳು ಮುಂದು: ಎಚ್.ಎಂ. ಮಹದೇವಶೆಟ್ಟಿ

ಹರದನಹಳ್ಳಿಯಲ್ಲಿ ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2018, 16:01 IST
Last Updated 29 ಆಗಸ್ಟ್ 2018, 16:01 IST
ಹರದನಹಳ್ಳಿಯ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಚ್.ಎಂ.ಮಹದೇವಶೆಟ್ಟಿ ಉದ್ಘಾಟಿಸಿದರು
ಹರದನಹಳ್ಳಿಯ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಚ್.ಎಂ.ಮಹದೇವಶೆಟ್ಟಿ ಉದ್ಘಾಟಿಸಿದರು   

ಚಾಮರಾಜನಗರ: ಸರ್ಕಾರಿ ಶಾಲಾ ಮಕ್ಕಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಖಾಸಗಿ ಶಾಲಾ ಮಕ್ಕಳಿಗೆ ಸ್ಪರ್ಧೆ ನೀಡುವಂತಹಪ್ರತಿಭೆ ಹೊಂದಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಎಂ. ಮಹದೇವಶೆಟ್ಟಿ ಹೇಳಿದರು.

ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಸರ್ಕಾರಿಪ್ರೌಢಶಾಲೆಯಲ್ಲಿ ಬುಧವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳುಶೈಕ್ಷಣಿಕವಾಗಿಮುಂದಿದ್ದಾರೆ. ಇಂದು ಅವರು ಖಾಸಗಿಶಾಲೆಗಳಿಗೆ ಸ್ಪರ್ಧೆ ಒಡ್ಡುತ್ತಿದ್ದಾರೆ. ಉತ್ತಮ ಅಂಕಗಳನ್ನು ಪಡೆದುಕೊಂಡು ಶಾಲೆಗಳ ಹೆಸರನ್ನು ಬೆಳಗಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ADVERTISEMENT

ಪ್ರತಿಭಾ ಕಾರಂಜಿ ಕಾರ್ಯಕ್ರಮ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೆಚ್ಚಿಸುತ್ತಿದೆ. ಇದರಲ್ಲಿ ಶಾಲಾ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ಬಶೆಟ್ಟಿ, ಉಪಾಧ್ಯಕ್ಷೆ ಚಿಕ್ಕಮ್ಮಣಿ, ಪಿಎಸಿಸಿ ಅಧ್ಯಕ್ಷ ಬಂಗಾರು, ಎಸ್‌ಡಿಎಂಸಿಅಧ್ಯಕ್ಷ ಜಯಸ್ವಾಮಿ, ಮುಖಂಡರಾದ ಕೃಷ್ಣಶೆಟ್ಟಿ, ಕಾವೇರಿ ಶಿವಕುಮಾರ್, ಸಿಆರ್‌ಪಿ ಮೇರಿ ಕ್ರಿಸ್ಟನ್, ಮುಖ್ಯ ಶಿಕ್ಷಕ ಜಯಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.