
ಮಹದೇಶ್ವರ ಬೆಟ್ಟ: ಹನೂರುನಲ್ಲಿ ಈಚೆಗೆ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕೋಣನಕೆರೆ ಬುಡಕಟ್ಟು ಆಶ್ರಮ ಶಾಲೆಯ ಮಕ್ಕಳು ಬಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಸತತ ಎರಡು ವರ್ಷಗಳಿಂದ ಪ್ರಶಸ್ತಿ ಬರುತ್ತಿದ್ದು ಅಭಿನಯ ಗೀತೆಯಲ್ಲಿ ರಂಗೀಲಾ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಆಗಿದ್ದಾಳೆ. ಭಕ್ತಿಗೀತೆ ಸ್ಪರ್ಧೆಯಲ್ಲಿ ಮಹಾಲಕ್ಷಿ ದ್ವಿತೀಯ ಬಹುಮಾನ, ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ನಾಗೇಂದ್ರ ತೃತೀಯ ಬಹುಮಾನ ಪಡೆದಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯ ಅಂಕಪ್ಪ, ಆದಿವಾಸಿ ಮುಖಂಡರಾದ ಮಹದೇವಸ್ವಾಮಿ, ಶಾಲೆಯ ಶಿಕ್ಷಕರಾದ ಸಿದ್ದರಾಜು, ಗಣೇಶ, ಸುಮತಿ, ಗವಿಸಿದ್ದಯ್ಯ ಅವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.