ADVERTISEMENT

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ವಿರುದ್ಧ ಪೊರಕೆ, ಚಪ್ಪಲಿ ಚಳವಳಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 12:42 IST
Last Updated 22 ಜನವರಿ 2021, 12:42 IST
ಉದ್ಧವ್‌ ಠಾಕ್ರೆಯ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪೊರಕೆ, ಚಪ್ಪಲಿ ಚಳವಳಿ ನಡೆಸಿದರು
ಉದ್ಧವ್‌ ಠಾಕ್ರೆಯ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪೊರಕೆ, ಚಪ್ಪಲಿ ಚಳವಳಿ ನಡೆಸಿದರು   

ಚಾಮರಾಜನಗರ: ಕರ್ನಾಟಕ ವಿರೋಧಿ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ವಿರುದ್ಧ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಪೊರಕೆ, ಚಪ್ಪಲಿ ಚಳವಳಿ ನಡೆಸಿದರು.

ಚಾಮರಾಜೇಶ್ವರ ಉದ್ಯಾನವನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭನನಿರತರು ಅಲ್ಲಿ ರಸ್ತೆ ತಡೆ ನಡೆಸಿ, ಉದ್ಧವ್‌ ಠಾಕ್ರೆ, ಎಂಇಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ರಾಜ್ಯದ ಸಂಸದರ ಸಭೆ ಕರೆದು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರಬೇಕಾದ ಪ್ರದೇಶವನ್ನು ರಾಜ್ಯಕ್ಕೆ ಬಿಡಿಸಿಕೊಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಹೇಳಿರುವುದು ವಿಷಾದಕರ ಸಂಗತಿ. ಇವರೊಬ್ಬ ಅವಿವೇಕ ಮುಖ್ಯಮಂತ್ರಿ. ಕನ್ನಡ ವಿರೋಧಿತನ ಪ್ರದರ್ಶಿಸಿದ್ದಾರೆ. ಎಂಇಎಸ್ ಪುಂಡರು ಕರ್ನಾಟಕ ಗಡಿಭಾಗದಲ್ಲಿ ಪುಂಡಾಟಿಕೆ ಮಾಡಿದ್ದಾರೆ. ಇವರ ವಿರುದ್ಧ ರಾಜ್ಯ ಸರ್ಕಾರ ಪ್ರಕರಣ ಹೂಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಉದ್ಧವ್ ಠಾಕ್ರೆ ಪದೇ ಪದೇ ಉದ್ಧಟನದ ವರ್ತನೆ ತೋರುವುದು ಸರಿಯಲ್ಲ. ಈ ವಿಚಾರದಲ್ಲಿ ರಾಜ್ಯ ಸಂಸದರು ಮೌನವಹಿಸಿರುವುದು ನಾಚಿಗೇಡಿನ ಸಂಗತಿ. ಕೂಡಲೇ ರಾಜ್ಯ ಸರ್ಕಾರ ಇದರ ಬಗ್ಗೆ ಗಮನಹರಿಸಿ ಮಹಾಜನ ವರದಿ ಅಂತಿಮ ಎಂಬುದನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಮನವರಿಕೆ ಮಾಡಬೇಕು. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಒಂದು ಇಂಚು ಜಾಗವನ್ನೂ ಕೊಡಬಾರದು’ ಎಂದು ಆಗ್ರಹಿಸಿದರು.

ಚಾ.ವೆಂ.ರಾಜ್ ಗೋಪಾಲ್, ಕಂಡಕ್ಟರ್ ಚಾ.ಸಿ.ಸೋಮನಾಯಕ, ಗು.ಪುರುಷೋತ್ತಮ್, ಹ.ವಿ.ನಟರಾಜು, ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ವೀರಭದ್ರ, ತಾಂಡವಮೂರ್ತಿ, ನಂಜುಂಡ, ಚಾ.ಸಿ.ಸಿದ್ದರಾಜು, ಸಾಗರ್, ಎಂಡಿಆರ್ ಸ್ವಾಮಿ, ವೈ.ಎನ್.ನಂಜುಂಡಸ್ವಾಮಿ ಇತರರು ಭಾಗವಹಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.