
ಗುಂಡ್ಲುಪೇಟೆ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಗುರುವಾರ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಮೇಲುಕಾಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ವೀರನಪುರ ಮತ್ತು ತೆರಕಣಾಂಬಿ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಿ ಕಪ್ಪು ಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.
ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು. ಶೇ10ರಷ್ಟು ವಿಶೇಷ ಭತ್ಯೆ ಮಂಜೂರಾತಿ ಮಾಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ನ್ಯಾಯಯುತ ಬೇಡಿಕೆ ಈಡೇರಿಕೆ ಸಂಬಂಧ ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಪರಿಹಾರ ಸಿಕ್ಕಿಲ್ಲ. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇಸಿದಿದ್ದರೆ ತರಗತಿಗಳನ್ನು ಬಹಿಷ್ಕರಿಸುವ ಜೊತೆಗೆ ವಿವಿಧ ಮಾದರಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೇಲುಕಾಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ವೀರನಪುರ ಮತ್ತು ತೆರಕಣಾಂಬಿ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಿಕ್ಷಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.