ಚಾಮರಾಜನಗರ: ನಗರದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್‌ಟಿಒ) ರಾಜ್ಯೋತ್ಸವ ಆಚರಿಸದೆ, ಕನ್ನಡಕ್ಕೆ ಅಪಮಾನ ಮಾಡಲಾಗಿದೆ ಎಂದು ಕನ್ನಡ ಸಂಘಟನೆಗಳ ಪ್ರತಿನಿಧಿಗಳು ಸೋಮವಾರ ಕಚೇರಿ ಮುಂಭಾಗ ಪ್ರತಿಭಟಿಸಿದರು.
ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ಶಾ.ಮುರಳಿ ಮಾತನಾಡಿ, ‘ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ರಾಜ್ಯೋತ್ಸವ ಆಚರಿಸದೇ ಗಡಿ ಜಿಲ್ಲೆಯಲ್ಲಿ ರಾಜ್ಯೋತ್ಸವ ದಿನದಂದೇ ಕನ್ನಡಕ್ಕೆ ಅಗೌರವ ತೋರಲಾಗಿದೆ. ಕನ್ನಡವನ್ನು ನಿರ್ಲಕ್ಷಿಸಿರುವ ಸಾರಿಗೆ ಇಲಾಖೆಯ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಬೇಕು’ ಎಂದು ಒತ್ತಾಯಿಸಿದರು.
ಚಾ.ರಂ.ಶ್ರೀನಿವಾಸಗೌಡ, ಚಾ.ಸಿ.ಸೋಮನಾಯಕ, ನಿಜಧ್ವನಿ ಗೋವಿಂದರಾಜು, ತಾಂಡವಮೂರ್ತಿ ಪ್ರತಿಭಟನೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.