ADVERTISEMENT

ಕೋವಿಡ್‌ ನಿಯಂತ್ರಣಕ್ಕೆ ಬರುವವರೆಗೆ ಶಾಲಾ-ಕಾಲೇಜು ಆರಂಭ ಮಾಡದಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 15:37 IST
Last Updated 5 ನವೆಂಬರ್ 2020, 15:37 IST
ಕೋವಿಡ್‌ ಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆವರೆಗೆ ಶಾಲಾ-ಕಾಲೇಜು ಪ್ರಾರಂಭಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು
ಕೋವಿಡ್‌ ಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆವರೆಗೆ ಶಾಲಾ-ಕಾಲೇಜು ಪ್ರಾರಂಭಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ರಾಜ್ಯದಲ್ಲಿ ಕೋವಿಡ್‌–19 ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಬಾರದು ಎಂದು ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಸೇರಿದ ಪ್ರತಿಭಟನನಿರತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಜಗತ್ತಿನಲ್ಲಿ ಜನರು ಕೋವಿಡ್‌ನಿಂದಾಗಿ ತತ್ತರಿಸುತ್ತಿದ್ದಾರೆ. ನಮ್ಮ ದೇಶ, ರಾಜ್ಯದಲ್ಲೂ ಸೋಂಕಿನಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಮೂರು ತಿಂಗಳು ಜನರು ಬಹಳ ಜಾಗರೂಕರಾಗಿರಬೇಕು ಎಂದುಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಳುತ್ತಿವೆ. ಆದರೆ, ಶಿಕ್ಷಣ ಇಲಾಖೆ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಸಂಬಂಧ ಸಭೆಗಳನ್ನು ನಡೆಸುತ್ತಿರುವುದು ಖಂಡನೀಯ. ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ಸಂಕಷ್ಟದ ಪರಿಸ್ಥಿತಿಯಲ್ಲೂ ಶುಲ್ಕ ವಸೂಲಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡಲು ಹೊರಟಿರುವುದು ನೋವಿನ ಸಂಗತಿ. ಒಂದು ಕಡೆ ಜನರು ಎಚ್ಚರಿಕೆಯಿಂದ ಇರಿ ಎಂದು ಹೇಳುತ್ತಿರುವ ಸರ್ಕಾರವೇ ಇನ್ನೊಂದು ಕಡೆ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಎಂದು ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿ ಮಾಡುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜು ಪ್ರಾರಂಭವನ್ನು ರದ್ದು ಮಾಡಬೇಕು’ ಎಂದು ಅವರು ಒತ್ತಾಯಿಸಿದರು.

ಕೆ.ಪುಟ್ಟಸ್ವಾಮಿಗೌಡ, ನಿಜಧ್ವನಿ ಗೋವೀಂದರಾಜು, ಗು.ಪುರುಷೋತ್ತಮ್, ಚಾ.ರಾ.ಕುಮಾರ್, ವೀರಭದ್ರ, ಸಿದ್ದರಾಜು, ತಾಂಡವಮೂರ್ತಿ, ದೊರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.