ಸಂತೇಮರಹಳ್ಳಿ: ಸಾರ್ವಜನಿಕರು ಪೊಲೀಸ್ ಇಲಾಖೆ ಜತೆ ಸಹಕರಿಸಿದರೆ ಮಾತ್ರ ಸಮಾಜದಲ್ಲಾಗುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಪಿಎಸ್‌ಐ ತಾಜುದ್ದೀನ್ ತಿಳಿಸಿದರು.
ಗ್ರಾಮದಲ್ಲಿ ಶುಕ್ರವಾರ ಪೊಲೀಸ್ ಠಾಣೆ ಆಯೋಜಿಸಿದ್ದ ‘ಮನೆ ಮನೆಗೆ ಪೊಲೀಸ್ ಭೇಟಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇವುಗಳನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶದ ಮೇರೆಗೆ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತಿ ಮನೆ ಗೆ ಭೇಟಿನೀಡಿ ಮಾಹಿತಿ ಪಡೆದು, ಅಪರಾಧ ಪ್ರಕರಣಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ’ ಎಂದರು. ಸಮಾಜದಲ್ಲಾಗುವ ಅಪರಾಧ ಪ್ರಕರಣಗಳು ಕಡಿಮೆಯಾಗಲು ಗ್ರಾಮಸ್ಥರು ಪೊಲೀಸರ ಜತೆ ಸಹಕರಿಸಬೇಕು ಎಂದರು.
ಮುಜುಗರ ಇಲ್ಲದೇ ಪೊಲೀಸರಿಗೆ ಮುಕ್ತವಾಗಿ ತಿಳಿಸಬೇಕು’ ಎಂದು ಮಾಹಿತಿ ನೀಡಿದರು.
ಎಎಸ್‌ಐ ಮಂಜುನಾಥ್, ಕಾನ್‌ಸ್ಟೆಬಲ್‌ಗಳಾದ ಪವಿತ್ರಾ, ಬಸವಣ್ಣ, ರಮೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.