ಚಾಮರಾಜನಗರ: 2024–25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯು ಶೇ 73.97 ಫಲಿತಾಂಶ ದಾಖಲಿಸುವುದರ ಜೊತೆಗೆ ರಾಜ್ಯಕ್ಕೆ 13ನೇ ಸ್ಥಾನ ಪಡೆದುಕೊಂಡಿದೆ.
2023–24ನೇ ಸಾಲಿನಲ್ಲಿ ಜಿಲ್ಲೆ ಶೇ 84.99 ಫಲಿತಾಂಶದೊಂದಿಗೆ ರಾಜ್ಯಕ್ಕೆ 14ನೇ ಸ್ಥಾನ ಪಡೆದಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆ ಒಂದು ಸ್ಥಾನ ಮೇಲಕ್ಕೇರಿದ್ದರೂ ಶೇಕಡವಾರು ಫಲಿತಾಂಶದಲ್ಲಿ ಶೇ 11.02ರಷ್ಟು ಕುಸಿತ ಕಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.