ADVERTISEMENT

ಹನೂರು: ‌ಮಳೆಗೆ ಧರೆಗುರುಳಿದ ಮರ, ಹಾರಿ ಹೋದ ಮನೆಯ ಮೇಲ್ಚಾವಣಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 6:37 IST
Last Updated 17 ಏಪ್ರಿಲ್ 2021, 6:37 IST
ಮನೆಯ ಮೇಲ್ಚಾವಣಿ ಹಾರಿ ಹೋಗಿರುವುದು
ಮನೆಯ ಮೇಲ್ಚಾವಣಿ ಹಾರಿ ಹೋಗಿರುವುದು   

ಹನೂರು: ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕೆಲವು ಕಡೆ ಮರಗಳು ಧರೆಗುರಳಿದರೆ ಮತ್ತೆ ಕೆಲವು ಕಡೆ ಮನೆಯ ಮೇಲ್ಚಾವಣಿ ಹಾರಿ ಹೋಗಿವೆ.

ರಾಮಾಪುರದಲ್ಲಿ ಶುಕ್ರವಾರ ಬೀಸಿದ ಗಾಳಿಗೆ ಠಾಣೆಯ ಆವರಣದಲ್ಲಿದ್ದ ಬೃಹತ್ ಮರವೊಂದು ನೆಲಕ್ಕುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕೌದಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಸುನೀತಾ ಎಂಬುವವರ ಮನೆ ಶುಕ್ರವಾರ ಬೀಸಿದ ಗಾಳಿಗೆ ಮೇಲ್ಛಾವಣಿ ಹಾರಿ ಹೋಗಿದೆ. ಮನೆಯ ಒಳಗಿದ್ದವರು ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಇದ್ದ ಒಂದು ಮನೆಯು ಗಾಳಿ ಹೊಡೆತಕ್ಕೆ ಸಿಲುಕಿ ಹಾಳಾಗಿದೆ ಕೂಡಲೇ ಸಂಬಂಧಪಟ್ಟ ಇಲಾಖೆ ಪರಿಹಾರ ನೀಡಬೇಕು ಎಂದು ಸುನಿತಾ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.