ADVERTISEMENT

₹ 3.62 ಕೋಟಿ ವೆಚ್ಚದಲ್ಲಿ ರಾಜಗೋಪುರ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 6:39 IST
Last Updated 7 ಸೆಪ್ಟೆಂಬರ್ 2025, 6:39 IST
ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿಯಲ್ಲಿರುವ ಕಾಮಾಕ್ಷಾಂಬಾ ಸಮೇತ ದಿವ್ಯಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ₹ 3.62 ಕೋಟಿ ವೆಚ್ಚದ ರಾಜಗೋಪುರ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿಯಲ್ಲಿರುವ ಕಾಮಾಕ್ಷಾಂಬಾ ಸಮೇತ ದಿವ್ಯಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ₹ 3.62 ಕೋಟಿ ವೆಚ್ಚದ ರಾಜಗೋಪುರ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.   

ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿರುವ ಕಾಮಾಕ್ಷಾಂಬಾ ಸಮೇತ ದಿವ್ಯಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ₹ 3.62 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜಗೋಪುರಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು 2005ರ ನ.4ರಂದು ಭಾರಿ ಮಳೆಗೆ ದೇವಸ್ಥಾನದ ರಾಜಗೋಪುರ ಕುಸಿದಿತ್ತು. 709 ವರ್ಷಗಳಷ್ಟು ಹಳೆಯ ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕೆ ನಿರಂತರ ಪ್ರಯತ್ನ ಮಾಡಲಾಗಿತ್ತು. 

ಫಲವಾಗಿ 3.62 ಕೋಟಿ ವೆಚ್ಚದಲ್ಲಿ ರಾಜಗೋಪುರ ಕಾಮಗಾರಿ ನಡೆಯಲಿದ್ದು ಹರದನಹಳ್ಳಿ, ಬಂಡಿಗೆರೆ, ಅಮಚವಾಡಿ, ವೆಂಕಟಯ್ಯನಛತ್ರ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ತಿಳಿಸಿದರು.

ADVERTISEMENT

ಇದೇವೇಳೆ ಕಾಮಾಕ್ಷಾಂಬಾ ಸಮೇತ ದಿವ್ಯಲಿಂಗೇಶ್ವರ ಸ್ವಾಮಿ ದೇವರಿಗೆ ವಿಶೇಷ ಪೂಜೆ ನಡೆಯಿತು. ಗಣಪತಿ, ನವಗ್ರಹ ಹೋಮಗಳು ನಡೆದವು. ತಲಕಾಡಿನಿಂದ ಗೋಪುರ ನಿರ್ಮಾಣಕ್ಕೆ ಬಂದಿರುವ ಸ್ಥಪತಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಹರದನಹಳ್ಳಿ, ಬಂಡಿಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ತಮಿಳುನಾಡಿನ ಭಕ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.