ಚಾಮರಾಜನಗರ: ಸುತ್ತೂರು ಮಠದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 110ನೇ ಜಯಂತಿ ಅಂಗವಾಗಿ ನಗರದ ಅನುಭವ ಮಂಟಪದಲ್ಲಿ ಭಾನುವಾರ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಿತು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಸಂಸ್ಥೆ ಹಾಗೂ ಕಿದ್ವಾಯಿ ಸ್ಮಾರಕ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ 2200ಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. 61 ಮಂದಿ ರಕ್ತದಾನ ಮಾಡಿದರು.
ಹರವೆ ಮಠದ ಸರ್ಪಭೂಷಣ ಸ್ವಾಮೀಜಿ ಮಾತನಾಡಿ, ಶಿವರಾತ್ರಿ ರಾಜೇಂದ್ರ ಶ್ರೀಗಳ ಜಯಂತಿ ಅಂಗವಾಗಿ ಆರೋಗ್ಯ ತಪಸಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ. ಶಿವರಾತ್ರಿ ರಾಜೇಂದ್ರ ಶ್ರೀಗಳು ಬದುಕನ್ನೇ ಬಡವರ ಶಿಕ್ಷಣಕ್ಕಾಗಿ ಮುಡಿಪಾಗಿಟ್ಟಿದ್ದರು. ಅವರ ಆಶಯದಂತೆ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ, ಮರಿಯಾಲ ಮಠದ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ, ಮೂಡುಗೂರು ವಿರಕ್ತ ಮಠದ ಇಮ್ಮಡಿ ಉದ್ದಾನ ಸ್ವಾಮೀಜಿ, ಕಬ್ಬಹಳ್ಳಿ ಮಠದ ಗುರುಸಿದ್ದ ಸ್ವಾಮೀಜಿ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಯುವ ಘಟಕದ ಜಿಲ್ಲಾಧ್ಯಕ್ಷ ವಿ.ಗುರುಪ್ರಸಾದ್ ಸೋಮವಾರಪೇಟೆ, ಜೆಎಸ್ ಎಸ್ ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ.ಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಗಾಯತ್ರಿ, ಉಪಾಧ್ಯಕ್ಷ ಮುರುಡೇಶ್ವರ ಸ್ವಾಮಿ, ಕೊಡಸೋಗೆ ಬಸವಣ್ಣ, ನಿರ್ದೇಶಕ ರತ್ಮಮ್ಮ, ಮುಖಂಡರಾದ ಗೀತಾ, ಬಾಲಚಂದ್ರಮೂರ್ತಿ, ನಾಗೇಂದ್ರ, ಟಿ.ಗುರು ಕೊಡಸೋಗೆ, ಶಿವಬಸಪ್ಪ,, ಬಿ.ಕೆ.ರವಿಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.