ADVERTISEMENT

ರಾಮಸಮುದ್ರ ಶಿವು ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 7:05 IST
Last Updated 25 ಜನವರಿ 2026, 7:05 IST
ರಾಮಸಮುದ್ರ ಶಿವು
ರಾಮಸಮುದ್ರ ಶಿವು   

ಚಾಮರಾಜನಗರ: ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಮಸಮುದ್ರ ಶಿವು ನೇಮಕವಾಗಿದ್ಡಾರೆ. ಈಚೆಗೆ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ ಕುಮಾರ್ ಆದೇಶ ಪ್ರತಿ ವಿತರಿಸಿದರು.

ನಗರ ಮಂಡಲ ಎಸ್‌ಸಿ ಮೋರ್ಚಾ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಮಾಧ್ಯಮ ಸಹ ಪ್ರಮುಖರಾಗಿ ಸೇವೆ ಸಲ್ಲಿಸಿರುವ ಶಿವು ಎಸ್‌ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷಕ್ಕೆ ಉತ್ತಮ ಸೇವೆ ಸಲ್ಲಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ವಕ್ತಾರ ಅಶ್ವಥ್ ನಾರಾಯಣ, ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಮಾಜಿ ಶಾಸಕರಾದ ಬಾಲರಾಜು, ಕೇಂದ್ರ ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಮುಖಂಡರಾದ ನೂರೊಂದು ಶೆಟ್ಟಿ, ಶಾಂತಮೂರ್ತಿ ಕುಲಗಾಣ, ಎಸ್.ಬಾಲಸುಬ್ರಹ್ಮಣ್ಯಂ, ಹೊನ್ನೂರು ಮಹದೇವ ಸ್ವಾಮಿ, ಮೂಡ್ನಾಕೂಡು ಪ್ರಕಾಶ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.