ADVERTISEMENT

ಗುಂಡ್ಲುಪೇಟೆ: ಪಡಿತರ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 8:22 IST
Last Updated 8 ಅಕ್ಟೋಬರ್ 2025, 8:22 IST
ಗುಂಡ್ಲುಪೇಟೆ ಪಟ್ಟಣದ ಹಳ್ಳದಕೇರಿ ಸಮೀಪ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಜಪ್ತಿ ಮಾಡಿರುವ ಆಹಾರ ಇಲಾಖೆ ಮತ್ತು ಪೊಲೀಸ ಇಲಾಖೆ ಅಧಿಕಾರಿಗಳು
ಗುಂಡ್ಲುಪೇಟೆ ಪಟ್ಟಣದ ಹಳ್ಳದಕೇರಿ ಸಮೀಪ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಜಪ್ತಿ ಮಾಡಿರುವ ಆಹಾರ ಇಲಾಖೆ ಮತ್ತು ಪೊಲೀಸ ಇಲಾಖೆ ಅಧಿಕಾರಿಗಳು   

ಗುಂಡ್ಲುಪೇಟೆ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಜಪ್ತಿ ಮಾಡಿ ಲಕ್ಷಾಂತರ ಮೌಲ್ಯದ ₹4.7 ಟನ್ ಪಡಿತರ ಅಕ್ಕಿ ವಶಪಡಿಸಿಕೊಂಡ ಘಟನೆ ಪಟ್ಟಣದ ಹಳ್ಳದಕೇರಿ ಸಮೀಪ ನಡೆದಿದೆ.

ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ತನ್ಮಯ್ ಸೂಚನೆಯಂತೆ ಆಹಾರ ಇಲಾಖೆ, ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಾಹನದಲ್ಲಿದ್ದ ₹1.60 ಲಕ್ಷ ಮೌಲ್ಯದ 4,750 ಕೆ.ಜಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.