ಸಂತೇಮರಹಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಸಂತೇಮರಹಳ್ಳಿ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿ, ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಮಹಮ್ಮದ್ ಫರಾಜ್ ಬಂಧಿತ ಆರೋಪಿ. ಚಾಮರಾಜನಗರದ ಮಾರ್ಗದಿಂದ ಸಂತೇಮರಹಳ್ಳಿ ಕಡೆಗೆ ಬರುತ್ತಿದ್ದ ಟಾಟಾ ಏಸ್ ವಾಹನದಲ್ಲಿ 10 ಚೀಲದಲ್ಲಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದು, ಈ ಕುರಿತು ಸಂತೇಮರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಆಹಾರ ನಿರೀಕ್ಷಕ ಎಂ.ಎನ್.ಪ್ರಸಾದ್, ಪಿಎಸ್‌ಐ ತಾಜುದ್ಧೀನ್, ಕಾನ್‌ಸ್ಟೆಬಲ್ ರಮೇಶ್, ಮಂಜುನಾಥ್ ದಾಳಿಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.