ADVERTISEMENT

ಚಾಮರಾಜನಗರ: ರತ್ನಮ್ಮಗೆ ವಾಲ್ಮೀಕಿ ಪ್ರಶಸ್ತಿ ಗೌರವ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 15:39 IST
Last Updated 17 ಅಕ್ಟೋಬರ್ 2024, 15:39 IST
ರತ್ನಮ್ಮ
ರತ್ನಮ್ಮ   

ಚಾಮರಾಜನಗರ: ಬುಡಕಟ್ಟು ಮಕ್ಖಳ ಶಿಕ್ಷಣಕ್ಕಾಗಿ ಹೋರಾಟ ಮಾಡುತ್ತಿರುವ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಹೋಬಳಿಯ ಮದ್ದೂರು ಕಾಲೋನಿಯ ಎಸ್‌.ರತ್ನಮ್ಮ ಅವರಿಗೆ 2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಲಭಿಸಿದೆ.

ರತ್ನಮ್ಮ ಬುಡಕಟ್ಟು ಸಮುದಾಯಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಪೂರಕವಾ ಕಾರ್ಯಕ್ರಮ ಹಾಗೂ ತರಬೇತಿ ಕಾರ್ಯಕ್ರಮಗಳ ಆಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬುಡಕಟ್ಟು ಜನರು ಇರುವ ಕಡೆಗಳಲ್ಲಿ ಆರೋಗ್ಯ ಶಿಬಿರಗಳ ಆಯೋಜನೆ, ಸಮುದಾಯದ ಕಲೆ, ಕುಲಕಸುಬು, ಸಂಸ್ಕೃತಿ ಉಳಿವಿಗೆ ಶ್ರಮಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT