ADVERTISEMENT

ಅಂಬೇಡ್ಕರ್ ಅರಿಯಲು ಸಂವಿಧಾನ ಓದು ಅಗತ್ಯ: ಪಿ.ದೇವರಾಜು

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 6:07 IST
Last Updated 12 ಜನವರಿ 2026, 6:07 IST
ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೊನಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನ ಸಮೀಪದ ಪರಿವರ್ತನ ಅಧ್ಯಯನ ಕೇಂದ್ರದಲ್ಲಿ ಡಾ.ಭೀಮರಾವ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು
ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೊನಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನ ಸಮೀಪದ ಪರಿವರ್ತನ ಅಧ್ಯಯನ ಕೇಂದ್ರದಲ್ಲಿ ಡಾ.ಭೀಮರಾವ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು   

ಚಾಮರಾಜನಗರ: ‘ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ತಿಳಿಯಲು ಸಂವಿಧಾನ ಓದುವುದು ಅವಶ್ಯಕ’ ಎಂದು ಭೋಗಾಪುರದ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪಿ.ದೇವರಾಜು ತಿಳಿಸಿದರು.

ನಗರದ ಹೌಸಿಂಗ್ ಬೋರ್ಡ್ ಕಾಲೊನಿಯ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನ ಸಮೀಪದ ಪರಿವರ್ತನ ಅಧ್ಯಯನ ಕೇಂದ್ರದಲ್ಲಿ ಡಾ.ಭೀಮರಾವ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡಿದ್ದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಂಬೇಡ್ಕರ್ ನೀಡಿರುವ ಕೊಡುಗೆ ಅರಿವಾಗಬೇಕಾದರೆ, ಅವರನ್ನು ಅರಿಯಬೇಕಾದರೆ ಸಂವಿಧಾನದ ಎಲ್ಲ ಸಂಪುಟಗಳನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು. ಬಳಿಕ ಅವರ ಆದರ್ಶ ತತ್ವಗಳನ್ನು ಪಾಲಿಸಬೇಕು ಎಂದರು.

ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅಮಚವಾಡಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಆರ್.ಮೂರ್ತಿ, ಸಾವಿತ್ರಿ ಬಾಫುಲೆ ಸಂಘದ ಜಿಲ್ಲಾಧ್ಯಕ್ಷೆ ಭವಾನಿದೇವಿ, ಅಧ್ಯಕ್ಷ ವಿ.ಮಹದೇವಯ್ಯ, ಕಾರ್ಯದರ್ಶಿ ಶಿವಮೂರ್ತಿ.ಆರ್, ಗೌರವ ಅಧ್ಯಕ್ಷ ಕೃಷ್ಣರಾಜು, ಖಜಾಂಚಿ ಕೃಷ್ಣಮೂರ್ತಿ, ಉಪಾಧ್ಯಕ್ಷ ಶಿವಕುಮಾರ್, ಮೋಹನಾಂಭ, ಯಶೋಧರಾ, ಪವನ್, ಯತೀಶ್, ಪ್ರತಾಪ್, ನಾಗೇಂದ್ರ, ಕೃಷ್ಣಪ್ಪ, ರವಿ ಅರಸ್ ಸೇರಿದಂತೆ ಹಲವರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.