ADVERTISEMENT

ಗಣರಾಜ್ಯೋತ್ಸವ: ಚಾಮರಾಜನಗರದಲ್ಲಿ ಸೋಮಣ್ಣ ಧ್ಜಜಾರೋಹಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 4:36 IST
Last Updated 26 ಜನವರಿ 2023, 4:36 IST
   

ಚಾಮರಾಜನಗರ: ನಗರದ‌ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಧ್ವಜಾರೋಹಣ ನೆರವೇರಿಸಿದರು.

ಬಳಿಕ ತೆರೆದ ವಾಹನದಲ್ಲಿ ಸಾಗಿದ ಅವರು ವಿವಿಧ ತುಕಡಿಗಳ ಪರಿವೀಕ್ಷಣೆ ನಡೆಸಿದರು.

ಪೊಲೀಸ್, ಅರಣ್ಯ, ಅಬಕಾರಿ ಇಲಾಖೆಗಳು, ಗೃಹರಕ್ಷಕ ದಳ, ಎನ್ ಸಿ ಸಿ, ವಿವಿಧ ಶಾಲೆಗಳ 18 ತುಕಡಿಗಳ ಪಥಸಂಚಲನ ಆಕರ್ಷಿಸಿತು.

ADVERTISEMENT

ಈ ಸಂದರ್ಭದಲ್ಲಿ ಜಿಲ್ಲೆಯ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪ್ರಸ್ತಾಪಿಸಿದರು. ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ, ಕಾಡಾ ಅಧ್ಯಕ್ಷ ಜಿ.ನಿಜಗುಣರಾಜು, ನಗರ ಸಭೆ ಅಧ್ಯಕ್ಷೆ ಸಿ.ಎಂ.ಆಶಾ, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಜಿ.ಪಂ ಸಿಇಒ ಕೆ.ಎಂ.ಗಾಯಿತ್ರಿ, ಎಸ್ ಪಿ ಟಿ.ಪಿ.ಶಿವಕುಮಾರ್ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

ಬಸವೇಶ್ವರ ಪ್ರತಿಮೆಗೆ ಶಂಕುಸ್ಥಾಪನೆ: ಇದಕ್ಕೂ ‌ಮೊದಲು ಸಚಿವ ಸೋಮಣ್ಣ ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.