
ಹನೂರು: ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಪ್ರಜೆಗಳ ಪಾತ್ರ ಹಿರಿದಾದದ್ದು. ಈ ದೃಷ್ಟಿ ಕೋನದಲ್ಲಿ ರಾಜಕೀಯವು ಎಲ್ಲಾ ವ್ಯಕ್ತಿಗಳ ಒಂದು ಭಾಗವಾಗಿದೆ ಎಂದು ಕೊಳ್ಳೇಗಾಲ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಂ.ರಂಜಿತ್ ಕುಮಾರ್ ತಿಳಿಸಿದರು.
ಪಟ್ಟಣದ ಹೊರಲವಲಯದಲ್ಲಿರುವ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಭಾರತ ಚುನಾವಣಾ ಆಯೋಗ ಮತ್ತು ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ರವರ ಸಹಯೋಗದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು.
ನಾವೆಲ್ಲರೂ ಪ್ರಜ್ಞಾವಂತರಾಗಬೇಕು. ನಮ್ಮ ಹಕ್ಕಿನ ಬಗ್ಗೆ ನಮಗೆ ಅರಿವಿರಬೇಕು. ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಮತದಾನದ ಹಕ್ಕು ನೀಡಿದೆ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದರಲ್ಲದೇ ಪ್ರಜಾಪ್ರಭುತ್ವದ ಸುಭದ್ರತೆಗಾಗಿ 1950ರಲ್ಲಿ ಭಾರತ ಚುನಾವಣಾ ಆಯೋಗ ಸ್ಥಾಪನೆಯಾಯಿತು. ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿದ್ದು, ದೇಶದಲ್ಲಿ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದ್ದು, ಮತದಾನದ ಮಹತ್ವವನ್ನು ಎಲ್ಲರೂ ಅರಿಯಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುನಿರಾಜು ಅವರು ಮಾತನಾಡಿ, ಜವಾಬ್ದಾರಿಯುತ ಮತದಾನ ನಮ್ಮೆಲ್ಲರ ನೆಮ್ಮದಿಯ ಜೀವನಕ್ಕೆ ದಾರಿ ಆಗಾಗಿ ಮತದಾನವು ನಾಗರೀಕರ ಹಕ್ಕಾಗಿದ್ದು ಮತ ಚಲಾಯಿಸಬೇಕಾದರೆ ಮತದಾನದ ಅರಿವಿರಬೇಕು ಎಂದು ಮತದಾನದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಚೈತ್ರಾ , ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಪ್ರಕಾಶ್ ನಾಥನ್, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.