
ಪ್ರಜಾವಾಣಿ ವಾರ್ತೆ
ಮಹದೇಶ್ವರ ಬೆಟ್ಟ: ಕೋಣನಕರೆ ಸಮೀಪದ ಮೂಕಳ್ಳಿ ಮಾರಮ್ಮನ ದೇವಸ್ಥಾನದ ತಿರುವಿನಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.
ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮೇಗೌಡನಹಳ್ಳಿಯ ಶಿವಪ್ಪ (23) ಹಾಗೂ ಸತ್ತಿ (24) ಮೃತಪಟ್ಟವರು. ಮೃತರು ಬೈಕ್‌ನಲ್ಲಿ ಕೌದಳ್ಳಿ ಗ್ರಾಮದಿಂದ ರಾಮೇಗೌಡನಹಳ್ಳಿಗೆ ತೆರಳುವಾಗ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.