ಚಾಮರಾಜನಗರ: ನಗರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸೋಮವಾರ ಶಾಸಕ ಪುಟ್ಟರಂಗಶೆಟ್ಟಿ ವೀಕ್ಷಿಸಿ ಪರಿಶೀಲಿಸಿದರು.
ನಗರಸಭೆ ಸದಸ್ಯರು, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಜತೆ ನಗರದ ಕರಿನಂಜನಪುರದಿಂದ ಸೋಮವಾರಪೇಟೆ ಸಂಪರ್ಕ ರಸ್ತೆ, ಗಾಳೀಪುರ ಬಡಾವಣೆ, ಗುಂಡ್ಲುಪೇಟೆ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಕಾಮಗಾರಿಗಳನ್ನು ವೀಕ್ಷಿಸಿದರು.
ಈ ಸಂದರ್ಭ ಮಾತನಾಡಿ, ಒಳಚರಂಡಿ ಕಾಮಗಾರಿ ಮುಗಿದಿರುವ ಕಡೆಗಳಲ್ಲಿ ರಸ್ತೆ ನಿರ್ಮಾಣವಾಗಿಲ್ಲ ಎಂದು ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಎಲ್ಲೆಲ್ಲಿ ರಸ್ತೆ ಕಾಮಗಾರಿ ಅಗತ್ಯವಿದೆ ಎಂಬ ಮಾಹಿತಿ ಪಡೆಯಲಾಗಿದೆ. ರಸ್ತೆ ನಿರ್ಮಾಣ ಸಂಬಂಧ ಅಂದಾಜು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಪಿಡಬ್ಲ್ಯುಡಿ ಎಂಜಿನಿಯರ್‌ಗೆ ಸೂಚನೆ ನೀಡಲಾಗಿದೆ ಎಂದು ಶಾಸಕರು ತಿಳಿಸಿದರು.
ನಗರಸಭೆ ಸದಸ್ಯ ಆರ್.ಎಂ.ರಾಜಪ್ಪ, ಪಿಡಬ್ಲ್ಯುಡಿ ಎಇಇ ಶಾಂತಾ, ಮುಖಂಡರಾದ ಶ್ರೀನಿವಾಸ್, ಸೈಯದ್ ಇರ್ಷದ್, ಮರಿಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.