
ಪ್ರಜಾವಾಣಿ ವಾರ್ತೆ
ಕೊಳ್ಳೇಗಾಲ: ಇಲ್ಲಿನ ನಗರಸಭೆಗೆ ಪೌರಾಯುಕ್ತರಾಗಿ ರುದ್ರಮ್ಮ ಶರಣಯ್ಯ ಅವರು ಗುರುವಾರ ಸಂಜೆ ಅಧಿಕಾರ ಸ್ವೀಕಾರ ಮಾಡಿದರು.
ಹಿಂದಿನ ಪೌರಾಯುಕ್ತ ರಮೇಶ್ ಅವರು ಮೈಸೂರಿಗೆ ವರ್ಗಾವಣೆ ಆಗಿದ್ದರಿಂದ ಎಇಇ ನಟರಾಜು ಅವರು ನಾಲ್ಕು ತಿಂಗಳಿಂದಲೂ ಪ್ರಭಾರ ಪೌರಾಯುಕ್ತರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ‘ನಗರದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಅಭಿವೃದ್ಧಿ ಶ್ರಮಿಸುತ್ತೇನೆ. ಇ –ಸ್ವತ್ತು ಸಮಸ್ಯೆಗಳನ್ನು ಬಗೆಹರಿಸಲು ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ತಿಳಿಸಿದರು.
ಕಚೇರಿ ಸಿಬ್ಬಂದಿ ಹಾಗೂ ಮುಖಂಡರು ಸನ್ಮಾನಿಸಿ ಬರಮಾಡಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.