ADVERTISEMENT

ಶರಣ ಪರಂಪರೆಯ ಪ್ರಮುಖರು ಹಡಪದ ಅಪ್ಪಣ್ಣ

ಸವಿತಾ ಸಮಾಜದಿಂದ ಮಲೆ ಮಾದಪ್ಪನ ಸನ್ನಿಧಿಯಲ್ಲಿ ಜಯಂತಿ ಆಚರಣೆ: ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 2:57 IST
Last Updated 6 ಆಗಸ್ಟ್ 2025, 2:57 IST
ಮಲೆ ಮಹದೇಶ್ವರ ಬೆಟ್ಟದಲ್ಲಿ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಅವರ ಭಾವಚಿತ್ರ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ನಡೆಯಿತು
ಮಲೆ ಮಹದೇಶ್ವರ ಬೆಟ್ಟದಲ್ಲಿ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಅವರ ಭಾವಚಿತ್ರ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ನಡೆಯಿತು   

ಮಹದೇಶ್ವರ ಬೆಟ್ಟ: ಬಸವಣ್ಣನವರ ಶರಣ ಪರಂಪರೆಯಲ್ಲಿ ಮಹತ್ವದ ಸ್ಥಾನ ಪಡೆದಿರುವ ಹಡಪದ ಅಪ್ಪಣ್ಣನವರ ಜಯಂತಿ ಮಾದಪ್ಪನ ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವುದು ಚಾರಿತ್ರಾಹ ಎಂದು ಸಾಲೂರು ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ಬಸವಣ್ಣನವರ ಹಾದಿಯಲ್ಲಿ ಮುನ್ನಡೆದ ಶರಣರಲ್ಲಿ ಹಡಪದ ಅಪ್ಪಣ್ಣನವರು ಪ್ರಮುಖರು. ಶರಣ ತತ್ವಗಳನ್ನು ಪಾಲಿಸಿಕೊಂಡು ಬರುವುದರ ಜೊತೆಗೆ ಹಡಪದ ಅಪ್ಪಣ್ಣನವರ ಕಾಯಕಕತ್ವವನ್ನು ಕಾಯವಾಚ ಅನುಸರಿಸಿಕೊಂಡು ಬರುತ್ತಿರುವ ಸವಿತಾ ಸಮಾಜ ಮಾದರಿ ಎಂದು ಶ್ಲಾಘಿಸಿದರು.

ಮಹದೇಶ್ವರ ಬೆಟ್ಟದಲ್ಲಿ ಕಾಯಕ  ಹೆಚ್ಚು ಮಹತ್ವ ಪಡೆದುಕೊಂಡಿದ್ದು ಕ್ಷೇತ್ರದಲ್ಲಿ ಸವಿತಾ ಸಮಾಜ ಪುಣ್ಯದ ಕೆಲಸ ಮಾಡುತ್ತಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡು ಸಮುದಾಯಗಳಾದ ಬೇಡಗಂಪಣ ಹಾಗೂ ಸವಿತಾ ಸಮಾಜಕ್ಕೆ ಹೆಚ್ಚು ಮಹತ್ವವಿದ್ದು, ಹಿಂದಿನ ಸಂಪ್ರದಾಯಗಳನ್ನು ಚಾಚೂತಪ್ಪದೆ ಪಾಲಿಸಿಕೊಂಡು ಸಂಪ್ರದಾಯ ಉಳಿಸಿ ಬೆಳೆಸಿಕೊಂಡು ಬರುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಶಾಸಕ ಎಂ.‌ಆರ್. ಮಂಜುನಾಥ್ ಮಾತನಾಡಿ ರಾಜ್ಯದಲ್ಲಿ ಉದ್ದಗಲ ಹರಡಿಕೊಂಡಿರುವ ಸವಿತಾ ಸಮಾಜದವರು ಮಲೆ ಮಹದೇಶ್ವರ ಬೆಟ್ಟದಲ್ಲಿ  ಒಂದೆಡೆ ಸೇರಿ ಹಬ್ಬದ ರೀತಿಯಲ್ಲಿ ಹಡಪದ ಅಪ್ಪಣನ ಜಯಂತಿ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ. ಜಯಂತಿಯ ಅದ್ದೂರಿತನ ನೋಡಿದರೆ ಸಂಘಟನೆಯ ಶಕ್ತಿಯ ಅರಿವಾಗುತ್ತದೆ. ಮುಂದೆಯೂ ಸಮುದಾಯ ಒಟ್ಟಾಗಿ ಮುನ್ನಡೆಬೇಕು. ಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗದಂತೆ ಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದರು.

ಪ್ರತಿಭಾ ಪುರಸ್ಕಾರ:

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸವಿತಾ ಸಮಾಜದ ವಿದ್ಯಾರ್ಥಿಗಳನ್ನು ‌ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಹಡಪದ ಅಪ್ಪಣ್ಣನವರ ಭಾವಚಿತ್ರವನ್ನು ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆ ಗಳಲ್ಲಿ ಮೆರವಣಿಗೆ ಮಾಡಲಾಯಿತು. ಯುವಕರು ನೃತ್ಯ ಮಾಡಿ ಸಂಭ್ರಮಿಸಿದರು.

ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರ್ಚನಾ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯೆ ರತ್ನಮ್ಮ, ಮುಖಂಡರಾದ ಕರಿಕಲ್ ಪುಟ್ಟಸ್ವಾಮಿ, ಸತೀಶ್, ಎಚ್.ಪಿ. ಲೋಕೇಶ್, ಗುಂಬಳ್ಳಿ ಬಸವರಾಜ್, ನಟರಾಜು, ಮಹದೇಶ್ವರ, ಸವಿತಾ ಸಮಾಜ ಸಂಘದ ಅಧ್ಯಕ್ಷ ರಾಜು, ತಾಲ್ಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.