
ಚಾಮರಾಜನಗರ: ತಾಲ್ಲೂಕಿನ ಬ್ಯಾಡಮೂಡ್ಲು ಗ್ರಾಮದಲ್ಲಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
ಹಿಂದುಳಿದ ಬ್ಯಾಡಮೂಡ್ಲು ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಇದೀಗ 9ನೇ ತರಗತಿಗೂ ಇಲ್ಲಿಯೇ ಅವಕಾಶ ಲಭಿಸಿದೆ. ಹರದನಹಳ್ಳಿ ಶಾಲೆಗೆ ಹೋಗವುದು ತಪ್ಪಲಿದೆ. ಹರದನಹಳ್ಳಿ ಶಾಲೆಯಲ್ಲಿ ಶಿಥಿಲ ಕೊಠಡಿಗಳ ದುರಸ್ತಿಗೆ ₹ 60 ಲಕ್ಷ (ಖಾಸಗಿ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ)ಸಿಎಸ್‌ಆರ್ ನಿಧಿಯಿಂದ ಲಭಿಸಿದೆ. ಹರದನಹಳ್ಳಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾಗಿದೆ. ಸಮಾಜದಲ್ಲಿರುವ ಎಲ್ಲ ಸಮಸ್ಯೆಗಳ ನಿವಾರಣೆಗೆ ಶಿಕ್ಷಣವೇ ಅಸ್ತ್ರವಾಗಿದ್ದು, ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಪೋಷಕರು, ಶಿಕ್ಷಕರು, ಸಮಾಜ ಎಚ್ಚರವಹಿಸಬೇಕು ಎಂದರು.
ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಸರ್ಕಾರ 9ನೇ ತರಗತಿ ಆರಂಭಕ್ಕೆ ಅನುಮತಿ ನೀಡಿರುವುದರಿಂದ ಗ್ರಾಮದ ವಿದ್ಯಾರ್ಥಿಗಳಿಗೆ ಅನೂಕೂಲವಾಗಿದೆ. ಪೋಷಕರು ಮಕ್ಕಳಿಗೆ ಬಾಲ್ಯವಿವಾಹ ಮಾಡಬಾರದು, ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ಡಿಡಿಪಿಐ ಚಂದ್ರಪಾಟೀಲ, ಬಿಇಒ ಹನುಮಶೆಟ್ಟಿ, ಅಕ್ಷರ ದಾಸೋಹ ಸಹಾಯಕ ಶ್ರೀನಿವಾಸ್, ದೈಹಿಕಶಿಕ್ಷಣ ನಿರ್ದೇಶಕ ಬಸವರಾಜು, ಶಿಕ್ಷಣ ಸಂಯೋಜಕರಾದ ಪರಶಿವಮೂರ್ತಿ, ಶಿವಕುಮಾರ್, ಶಾಲಾ ಮುಖ್ಯ ಶಿಕ್ಷಕ ಕೆ.ರಾಚಯ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹದೇವಶೆಟ್ಟಿ, ಸದಸ್ಯರಾದ ರಾಜಣ್ಣ, ಮರಿಸ್ವಾಮಿ, ಮಹೇಶ್, ಎಸ್‌ಡಿಎಂಸಿ ಅಧ್ಯಕ್ಷ ಮರಿಸ್ವಾಮಿ, ಮುಖಂಡರಾದ ನಾಗರಾಜು, ಶಿವಣ್ಣ, ಪುಟ್ಟಸ್ವಾಮಿ, ಲಿಂಗಶೆಟ್ಟಿ, ಚೇತನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.