ಅಪಘಾತ
–ಪ್ರಾತಿನಿಧಿಕ ಚಿತ್ರ
ಚಾಮರಾಜನಗರ: ನಾಲ್ವರು ಬಾಲಕರಿದ್ದ ಸ್ಕೂಟರ್, ಲಾರಿ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ, ಸ್ಕೂಟರ್‌ನಲ್ಲಿದ್ದ ಗಾಳಪುರ ಬಡಾವಣೆಯ ಮೆಹರಾನ್ (13), ಅದಾನ್ ಪಾಷಾ (9) ಹಾಗೂ ಕೆಪಿ ಮೊಹಲ್ಲದ ರಯಾನ್ (8) ಮೃತಪಟ್ಟಿದ್ದು, ಫೈಜಲ್ (11) ಎಂಬಾತನ ಸ್ಥಿತಿ ಗಂಭೀರವಾಗಿದೆ.
ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರಿವರದಾಜನ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಸ್ಕೂಟರ್‌ನಲ್ಲಿ ಬಾಲಕರು ಬರುವಾಗ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
‘ತಮಿಳುನಾಡಿನ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಚಾಮರಾಜನಗರ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಸಿಲುಕಿದ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು, ಲಾರಿ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.