ADVERTISEMENT

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಉಚಿತ ಮಾಸ್ಕ್‌

ಭಾರತ್‌ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ನಿಂದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿಗೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 16:55 IST
Last Updated 15 ಜೂನ್ 2020, 16:55 IST
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಲಾದ ಮಾಸ್ಕ್‌ಗಳನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರಿಗೆ ಹಸ್ತಾಂತರಿಸಲಾಯಿತು
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಲಾದ ಮಾಸ್ಕ್‌ಗಳನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರಿಗೆ ಹಸ್ತಾಂತರಿಸಲಾಯಿತು   

ಚಾಮರಾಜನಗರ: ಇದೇ 25ರಿಂದ ಆರಂಭವಾಗಲಿರುವಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯಲಿರುವ ಜಿಲ್ಲೆಯ ಎಲ್ಲ ಮಕ್ಕಳಿಗೆ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಘಟಕದ ವತಿಯಿಂದ ಉಚಿತವಾಗಿ ಮಾಸ್ಕ್‌ಗಳ ವ್ಯವಸ್ಥೆ ಮಾಡಲಾಗಿದೆ.

ಸ್ಕೌಟ್ಸ್‌ ಅಂಡ್‌ ಗೈಡ್ಸ್‌ನ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಸೋಮವಾರ ಭೇಟಿ ಮಾಡಿ ₹1 ಲಕ್ಷ ಮೌಲ್ಯದ ‌12 ಸಾವಿರ ಮಾಸ್ಕ್‌ಗಳನ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಕೋವಿಡ್‌–19 ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹35 ಸಾವಿರ ದೇಣಿಗೆಯ ಚೆಕ್‌ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತ್‌ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ನ ಜಿಲ್ಲಾ ತರಬೇತಿ ಆಯುಕ್ತ ಕೆ.ಎಸ್‌.ಮಹದೇವಸ್ವಾಮಿ, ‘ಸಂಸ್ಥೆಯ ರಾಜ್ಯ ಆಯುಕ್ತ ಪಿ.ಜಿ.ಆರ್‌.ಸಿಂಧ್ಯ ಅವರ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಮಾಸ್ಕ್‌ಗಳನ್ನು ನೀಡಲಾಗಿದೆ. ಇದರ ಜೊತೆಗೆ ಪರೀಕ್ಷೆಯ ಸಮಯದಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಂಸ್ಥೆಯ ಸ್ವಯಂ ಸೇವಕರು ಮಾಸ್ಕ್‌ ವಿತರಣೆ ಮತ್ತು ಸ್ಯಾನಿಟೈಸರ್‌ ನೀಡುವ ಕಾರ್ಯಕ್ಕೆ ಸಹಕರಿಸಲಿದ್ದಾರೆ’ ಎಂದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಡಿಡಿಪಿಐ ಎಸ್‌.ಟಿ.ಜವರೇಗೌಡ, ಸ್ಕೌಟ್ಸ್‌ ಅಂಡ್‌ ಗೈಡ್ಸ್‌ನ ಜಿಲ್ಲಾ ಉಪಾಧ್ಯಕ್ಷ ವಿ.ಮಲ್ಲಿಕಾರ್ಜುನ ಸ್ವಾಮಿ, ಆಯುಕ್ತ ಶರತ್‌ ಮಾದಪ್ಪ, ಜಿಲ್ಲಾ ಕಾರ್ಯದರ್ಶಿ ವಿ.ಎಂ.ರಾಮಚಂದ್ರ, ಗೈಡ್ಸ್‌ ಆಯುಕ್ತೆ ಡಾ.ಶ್ವೇತಾ ಶಶಿಧರ್‌, ತಾಲ್ಲೂಕು ಕಾರ್ಯದರ್ಶಿಗಳಾದ ಶಿವಸ್ವಾಮಿ, ಸಿದ್ದಲಿಂಗಮೂರ್ತಿ, ರಂಗಸ್ವಾಮಿ, ಅನ್ನಪೂರ್ಣಮ್ಮ, ಜಿಲ್ಲಾ ಸಂಘಟಕ ಕೆ.ಪಿ.ಅಶೋಕ್‌ ಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.